ಡೈಲಿ ವಾರ್ತೆ: 10/ಜೂ./2024

ಮೈಸೂರು: ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ!

ಮೈಸೂರು: ಮೈಸೂರಿನಲ್ಲಿ ಅನ್ನದಾನೇಶ್ವರ ಹಿರಿಯ ಮಠದ ಹಿರಿಯ ಸ್ವಾಮೀಜಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕೊಲೆಯಾದವರನ್ನು ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಎಂದು ಗುರುತಿಸಲಾಗಿದೆ.

ರವಿ (60) ಎಂಬಾತ ಈ ಕೃತ್ಯ ಎಸಗಿದ್ದು, ಮಲಗಿದ್ದಲ್ಲೇ ಸ್ವಾಮೀಜಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.