ಡೈಲಿ ವಾರ್ತೆ: 12/ಜೂ./2024

ಜೂನ್ 24 ರಿಂದ ಜುಲೈ 3 ರವರೆಗೆ 18 ನೇ ಲೋಕಸಭೆಯ ಮೊದಲ ಅಧಿವೇಶನ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್‌ 24 ರಂದು ಆರಂಭವಾಗಿ  ಜುಲೈ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.

9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹೊಸ ಸಂಸದರು (MP) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.