ಡೈಲಿ ವಾರ್ತೆ: 17/ಜೂ./2024

ತೀರ್ಥಹಳ್ಳಿ: ಬಸ್-ಲಾರಿ ಮುಖಾಮುಖಿ ಡಿಕ್ಕಿ – ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು!

ತೀರ್ಥಹಳ್ಳಿ: ಖಾಸಗಿ ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.16ರ ಭಾನುವಾರ ಮಧ್ಯರಾತ್ರಿ ಮಂಡಗದ್ದೆ ಸಮೀಪ ನಡೆದಿದೆ.

ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಈ ಪರಿಣಾಮ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.