ಡೈಲಿ ವಾರ್ತೆ: 18/ಜೂ./2024

ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ಹೃದಯಾಘಾತದಿಂದ ನಿಧನ

ಉಡುಪಿ : ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ಅವರು ಜೂ.18ರ ಮಂಗಳವಾರ ಅಂಬಲಪಾಡಿಯ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ. ಇವರು ಉಡುಪಿ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದರು. ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು.