


ಡೈಲಿ ವಾರ್ತೆ: 19/ಜೂ./2024


ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ
ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.
ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಮಾಲಾಶ್ರೀ( 29) ಮೃತ ದುದೈರ್ವಿ
ಮಾಲಾಶ್ರೀ ಕುಂಚಾವರಂನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.