ಡೈಲಿ ವಾರ್ತೆ: 20/ಜೂ./2024
ಮೆಕ್ಕಾದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ ಮೃತಪಟ್ಟ 645 ಹಜ್ ಯಾತ್ರಿಕರ ಪೈಕಿ 90 ಮಂದಿ ಭಾರತೀಯರು!
ಜೆರುಸಲೇಂ: ಇಸ್ಲಾಂ ಧರ್ಮದ ಪವಿತ್ರ ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಭಾರೀ ಪ್ರಮಾಣದ ಸಾವು-ನೋವಾಗಿದೆ. ಮೃತಪಟ್ಟವರ ಸಂಖ್ಯೆ 645ಕ್ಕೆ ಏರಿಕೆಯಾಗಿದ್ದು, ಈ ಪೈಕಿ 90 ಮಂದಿ ಭಾರತೀಯರೂ ಇದ್ದಾರೆ ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು.
ಮರಣ ಸಂಖ್ಯೆ ಹೆಚ್ಚಿದ್ದು ಏಕೆ? ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಮಂದಿ ಯಾತ್ರಿಕರು ಹಜ್ ಯಾತ್ರೆ ಹಮ್ಮಿಕೊಂಡಿದ್ದರು. ವಿವಿಧ ದೇಶಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಬಂದಿದ್ದರು. ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 645 ಮಂದಿ ಯಾತ್ರಿಕರು ಮೃತಪಟ್ಟಿದ್ದು, 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಹಜ್ ಯಾತ್ರೆಗೆ ಬರುವವರಿಗೆ ಸೂಕ್ತ ಎಸಿ ಸೌಲಭ್ಯ ಇರುವುದಿಲ್ಲ, ಸೂರು ಸಿಗುವುದಿಲ್ಲ. ಈ ಕಾರಣದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.