



ಡೈಲಿ ವಾರ್ತೆ: 22/ಜೂ./2024


ಕರಾವಳಿ ಭಾಗದಲ್ಲಿ ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ
ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಂಗಳೂರು ನಗರ ಸೇರಿ ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ಕಡಿಮೆಯಾಗಿದ್ದು, ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ರೆಡ್ ಅಲರ್ಟ್ ಅವಧಿಯಲ್ಲಿ ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗಲಿದ್ದು, ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದೆ. ಉಡುಪಿ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮತ್ತು ಶುಕ್ರವಾರ ಉತ್ತಮ ಮಳೆಯಾಗಿದೆ. ಇನ್ನು ಮುಂದಿನ 2 ದಿನಗಳು ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.