ಡೈಲಿ ವಾರ್ತೆ: 22/ಜೂ./2024

ಕುಂಬಳೆ: ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಸವಾರ ಸಾವು!

ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಕೊಡಿಯಮ್ಮ ಚೆಪ್ಪಿನಡ್ಕದ ಅಸ್ಗರ್ (24) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ನಡೆದಿದ್ದು. ಗಂಭೀರ ಗಾಯಗೊಂಡಿದ್ದ ಸವಾರ ಅಸ್ಗರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸಹ ಸವಾರ ಅನಸ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.