ಡೈಲಿ ವಾರ್ತೆ: 23/ಜೂ./2024

ಕಾರ್ಕಳ: ದ್ವಿಚಕ್ರ ವಾಹನ ಡಿಕ್ಕಿ – ಪಾದಚಾರಿ ಬಾಲಕಿ ಮೃತ್ಯು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ಜೂ. 22 ರಂದು ನಡೆದಿದೆ.

ಮೃತ ಬಾಲಕಿ ನಂದಳಿಕೆ ಕೆದಿಂಜೆ ದಡ್ಡು ನಿವಾಸಿ ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ.

ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಹುಣ್ಣಿಮೆ ಪೂಜೆಗೆಂದು ಸಂಜೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಜಾಗರೂಕತೆ ಹಾಗೂ ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿ ಬಾಲಕಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.