ಡೈಲಿ ವಾರ್ತೆ: 23/ಜೂ./2024

ಸ್ಕೂಟಿಗೆ ಕಾರು ಡಿಕ್ಕಿ: ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಾಗರ: ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಭಾನುವಾರ ಕುಗ್ವೆ ಸಮೀಪ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಅನುಷಾ(20) ಎಂದು ಗುರುತಿಸಲಾಗಿದೆ.

ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಸಾಗರದಿಂದ ಜೋಗ ಕಡೆಗೆ ಚಲಿಸುತ್ತಿದ್ದ ಕಾರು ಕುಗ್ವೆ ಸಮೀಪ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡಾ ವಿದ್ಯಾರ್ಥಿನಿಯನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುತ್ತಾರೆ.