ಡೈಲಿ ವಾರ್ತೆ: 25/ಜೂ./2024

ಗರುಡ ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ – ಪ್ರಕರಣ ದಾಖಲು

ಉಡುಪಿ: ಇತ್ತೀಚಿಗೆ ಉಡುಪಿ ನಗರದಲ್ಲಿ ದಾಳಿ ನಡೆಸಿ ಬಂಧಿತರಾಗಿರುವ ಗರುಡ ಗ್ಯಾಂಗ್ ವಾರ್ ಆರೋಪಿಗಳು ಜೈಲಿನಲ್ಲಿ ಜೈಲು ಅಧಿಕಾರಿ ಹಾಗೂ ಸಿಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ತಗಾದೆ ವಿಚಾರಣಾ ಕೈದಿ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಜಿಲ್ಲಾ ಜೈಲ್ ಅಧೀಕ್ಷಕ, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಕರೆ ಮಾಡಲು ತಡವಾಯಿತೆಂದು ಜೈಲರ್ ಎಸ್.ಎ. ಶಿರೋಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ. ಪಾಟೀಲ್ ಹಾಗೂ ಸಿಬ್ಬಂದಿಗಳನ್ನು ತಳ್ಳಿ ಕೊಠಡಿಯಲ್ಲಿದ್ದ ಕುರ್ಚಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಜೊತೆಗೆ ಅಡುಗೆ ಕೋಣೆಯಲ್ಲಿದ್ದ ಚಹಾ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.