ಡೈಲಿ ವಾರ್ತೆ: 25/ಜೂ./2024
🖊️ . ಸುರೇಂದ್ರ ಕಾಂಚನ್ ಸಂಗಮ್
ಕುಂದಾಪುರ: ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್ ಇವರನ್ನು ಭೇಟಿಯಾಗಿ ಚರ್ಚಿಸಲಾಯಿತು.
ಈ ಬಗ್ಗೆ ಅವರು ಪರಿಹಾರಕ್ಕಾಗಿ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯ ನಿರ್ವಹಣಾಧಿಕಾರಿ,,ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕುಂದಾಪುರ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರೂರು ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಯವರು ತಿಳಿಸಿದರು.