ಡೈಲಿ ವಾರ್ತೆ: 27/ಜೂ./2024
ಪುತ್ತೂರು: ಧರೆ ಕುಸಿದು ಮನೆಗೆ ಹಾನಿ, ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು ಅನೇಕ ಕಡೆ ಧರೆಕುಸಿದ ಘಟನೆ ನಡೆಯುತ್ತಿದೆ.
ಇದೀಗ ಪುತ್ತೂರು ಬನ್ನೂರು ಬಳಿ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡು ಮನೆಯದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.
ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡಿಲಗೊಂಡು ಮನೆ ಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು. ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ ಮಾಡಿದ್ದಾರೆ.