ಡೈಲಿ ವಾರ್ತೆ: 29/ಜೂ./2024

ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತ – ಚಾಲಕ ಮೃತ್ಯು!

ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಅತಿ ವೇಗದಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಡು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟಿರುವ ಘಟನೆ ಉಜಿರೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಮೃತ ಕಾರು ಚಾಲಕ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ.
ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.