ಡೈಲಿ ವಾರ್ತೆ: 02/ಜುಲೈ /2024

ಕರಾವಳಿ ಹಾಗೂ ಮಧ್ಯ ಕರ್ನಾಟಕದಲ್ಲಿ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ (IMD) ಹೇಳಿದೆ.