



ಡೈಲಿ ವಾರ್ತೆ: 02/ಜುಲೈ /2024


ಪಣಂಬೂರು: ದನ ಅಡ್ಡ ಬಂದು ಸ್ಕೂಟರ್ ಪಲ್ಟಿ – ಯುವಕ ಮೃತ್ಯು!
ಮಂಗಳೂರು: ಯುವಕನೋರ್ವ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನವೊಂದು ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬಳಿ ನಡೆದಿದೆ.
ಮೃತಪಟ್ಟ ಯುವಕ ಸುರತ್ಕಲ್ ಸಮೀಪದ ಕುಳಾಯಿ ನಿವಾಸಿ ಉಜ್ವಲ್(26) ಎಂದು ಗುರುತಿಸಲಾಗಿದೆ.
ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.