ಡೈಲಿ ವಾರ್ತೆ: 03/ಜುಲೈ /2024

ಶಿರಾಳಕೊಪ್ಪ: ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿ ಬಿದ್ದ ಖಾಸಗಿ ಬಸ್ – ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿ ಬಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ ಕಡೆಯಿಂದ ಆನವಟ್ಟಿ ಕಡೆಗೆ ಹೊರಟಿತ್ತು. ಅತಿ ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡಿದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಲು ಪೊಲೀಸರು ಹರಸಾಹಸಪಟ್ಟರು. ಕಾರು ಚಾಲಕನ ಗುರುತು ಇನ್ನಷ್ಟೆ ತಿಳಿಯಬೇಕಿದೆ.