ಡೈಲಿ ವಾರ್ತೆ: 03/ಜುಲೈ /2024

ಒಂಟಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ: ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ವ್ಯಕ್ತಿಯೋರ್ವನ್ನು ಬಂಧಿಸಿದ ಘಟನೆ ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ.

ಆರೋಪಿ ಮಾವಿನಹಳ್ಳಿ ಗ್ರಾಮದ ಮಂಜು ಎಂಬವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ ಬೆಳಗ್ಗೆ ವಾಕಿಂಗ್ ಹೋಗುವ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಾ ತೋಟಕ್ಕೆ ಹೋಗುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ ಅಂಗನವಾಡಿ ಶಿಕ್ಷಕಿಯ ಜೊತೆ ದರ್ವರ್ತನೆ ತೋರಿ ತೋಟದಲ್ಲಿ ಅವಿತು ಕುಳಿತಿದ್ದ ಕಾಮುಕ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.