ಡೈಲಿ ವಾರ್ತೆ: 04/ಜುಲೈ /2024

ಉಡುಪಿ:ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು!

ಉಡುಪಿ: ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿರುತ್ತಾಳೆ.

ಬಾಲಕಿಗೆ ಬೆಳಿಗ್ಗೆ ಎದೆ ನೋವು ಕಾಣಿಸಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾಳೆ. ಮಂಗಳವಾರ ಶಾಲೆಗೆ ಬಂದಿದ್ದಳು. ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇವಳು ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ.