ಡೈಲಿ ವಾರ್ತೆ: 04/ಜುಲೈ /2024
ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುಖ್ಯವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ (ಜುಲೈ 5) ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.