ಡೈಲಿ ವಾರ್ತೆ: 06/ಜುಲೈ /2024

ಶಿವಮೊಗ್ಗ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!

ಶಿವಮೊಗ್ಗ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 6 ರಂದು ಶನಿವಾರ ಬೆಳಿಗ್ಗೆ ಮುದ್ದಿನಕೊಪ್ಪ ಲಯನ್ ಸಫಾರಿ ಬಳಿ ನಡೆದಿದೆ.

ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.