ಡೈಲಿ ವಾರ್ತೆ: 06/ಜುಲೈ /2024

ಗುಜರಾತ್ ನಲ್ಲಿ ಕುಸಿದು ಬಿದ್ದ 6 ಅಂತಸ್ತಿನ ಕಟ್ಟಡ – 15 ಮಂದಿಗೆ ಗಾಯ!

ಗಾಂಧಿನಗರ: ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ 15 ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರು ಕಟ್ಟಡದ ಕೆಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ಕುಸಿತದಿಂದ 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಇಂದು ಈ ಕಟ್ಟಡ ಕುಸಿದು ಬಿದ್ದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.