ಡೈಲಿ ವಾರ್ತೆ: 07/ಜುಲೈ /2024

ಉತ್ತರಕನ್ನಡ: ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ – ಜು. 8 ರಂದು (ನಾಳೆ) ಈ ತಾಲೂಕಿನ ಶಾಲಾ ಕಾಲೇಜಿಗೆ ರಜೆ.

ಉತ್ತರ ಕನ್ನಡ: ಜಿಲ್ಲೆಯ ಕರಾವಳಿ ಭಾಗದಲ್ಲಿ ರವಿವಾರವು ವ್ಯಾಪಕ ಮಳೆಯಾಗಿತ್ತಿರುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.