ಡೈಲಿ ವಾರ್ತೆ: 08/ಜುಲೈ /2024

ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.