ಡೈಲಿ ವಾರ್ತೆ: 08/ಜುಲೈ /2024

ದಕ್ಷಿಣ ಕನ್ನಡ: ವ್ಯಾಪಕ ಮಳೆ ಹಿನ್ನಲೆ ಜು.9 ರಂದು (ನಾಳೆ) ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜ್ ಗಳಿಗೆ
ಜು.9 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.