ಡೈಲಿ ವಾರ್ತೆ: 10/ಜುಲೈ /2024

ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲು!

ಮಂಗಳೂರು: ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ( BNS) 351(3), 353 ಸೆಕ್ಷನ್ ಅಡಿ ಎಫ್ ಐಆರ್ ದಾಖಲಾಗಿದೆ.