ಡೈಲಿ ವಾರ್ತೆ: 10/ಜುಲೈ /2024
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಗ್ಯಾಸ್ ಟ್ಯಾಂಕರ್ – ಚಾಲಕ ಪಾರು
ಕುಮಟಾ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆ ಗೋಡೆಗೆ ಡಿಕ್ಕಿ ಹೊಡೆದು ನದಿಯ ಬದಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊನ್ಮಾವ್ ಬಳಿ ನಡೆದಿದೆ.
ಗೋವಾದಿಂದ ಮಂಗಳೂರು ಹೊರಟಿದ್ದ ರಾಜರಾಜಿ ಕಂಪನಿಯ ಎಚ್.ಪಿ ಗ್ಯಾಸ್ ಟ್ಯಾಂಕರ್ ಇದಾಗಿದ್ದು, ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಅನಿಲ ರಹಿತ ಗ್ಯಾಸ್ ಟ್ಯಾಂಕರ್ ಸೇತುವೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ. ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.
ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.