ಡೈಲಿ ವಾರ್ತೆ: 12/ಜುಲೈ /2024
ಕೋಟತಟ್ಟು ಗ್ರಾ. ಪಂ. ನ 2024-25ನೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಬಳಕೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ದಿನಾಂಕ ಜು. 12 ರಂದು ಶುಕ್ರವಾರ ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ತಾಲೂಕು ಪಂಚಾಯತ್ ಬ್ರಹ್ಮಾವರದ ಯೋಜನಾಧಿಕಾರಿ ಸಂದೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕು ವ್ಯವಸ್ಥಾಪಕರಾದ ಹುಸೇನ್ ಸಾಬ ದಾ. ಕರನಾಚಿ ಅವರು ಉದ್ಯೋಗ ಖಾತ್ರಿ ಯೋಜನೆ ಹಾಗೂ 15ನೇ ಹಣಕಾಸು ಆಯೋದ ಬಗ್ಗೆ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ಶ್ರೀಮತಿ ಅಶ್ವಿನಿ, ಶ್ರೀಮತಿ ವಿದ್ಯಾ ಪಿ, ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳು, ಸಾರ್ವಜನಿಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್ ಅವರು ಗ್ರಾಮಸಭೆ ನಿರೂಪಿಸಿದರು ಹಾಗೂ ಸಿಬ್ಬಂದಿ ಶ್ರೀಮತಿ ಶಕೀಲಾ ಕೆ ಅವರು ವಂದಿಸಿದರು.