ಡೈಲಿ ವಾರ್ತೆ: 14/ಜುಲೈ /2024

ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಹಲವು ತಾಲ್ಲೂಕುಗಳ ಶಾಲೆ, ಕಾಲೇಜುಗಳಿಗೆ ಜು. 15 ರಂದು ಘೋಷಣೆ

ಕಾರವಾರ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.