ಡೈಲಿ ವಾರ್ತೆ: 17/ಜುಲೈ /2024
ಉತ್ತರ ಕನ್ನಡ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನಲೆ ಜು. 18 ರಂದು (ನಾಳೆ) ರಜೆ ಘೋಷಣೆ – ಡಿಸಿ ಲಕ್ಷ್ಮಿಪ್ರಿಯಾ
ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ (ಜುಲೈ 18) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಸಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.