ಡೈಲಿ ವಾರ್ತೆ: 17/ಜುಲೈ /2024
ದ.ಕ. ಜಿಲ್ಲೆಯ ಐದು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು. 18 ರಂದು ಗುರುವಾರ ರಜೆ ಘೋಷಣೆ : ಡಿಸಿ ಮುಲ್ಲೈ ಮುಗಿಲನ್
ಮಂಗಳೂರು: ದ.ಕ.ಜಿಲ್ಲೆಯ ಹಲವು ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.