ಡೈಲಿ ವಾರ್ತೆ: 18/ಜುಲೈ /2024

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನಲೆ ನಾಳೆ (ಜುಲೈ 19) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ