ಡೈಲಿ ವಾರ್ತೆ: 18/ಜುಲೈ /2024

ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ ನಾಳೆ (ಜು.19 ರಂದು) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾದ್ಯಂತ ನಾಳೆ 19 ರಂದು ಎಲ್ಲಾ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ, ದಾಂಡೇಲಿ, ಯಲ್ಲಾಪುರ, ಮುಂಡಗೋಡ, ಹಳಿಯಾಳ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.