ಡೈಲಿ ವಾರ್ತೆ: 20/ಜುಲೈ /2024
ಕೋಟತಟ್ಟು ಗ್ರಾ. ಪಂ. ನಲ್ಲಿ ಡೆಂಗ್ಯೂ ಸಾಂಕ್ರಾಮಿಕ ಕಾಯಿಲೆ ತಡೆಗಟ್ಟಲು ಟಾಸ್ಕ್ ಫೋರ್ಸ್ ಸಭೆ
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಡೆಂಗ್ಯೂ ಸಾಂಕ್ರಾಮಿಕ ಕಾಯಿಲೆ ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್ ಫೋರ್ಸ್ ಸಭೆಯು ಜು. 20 ರಂದು ಶನಿವಾರ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್, ಆರೋಗ್ಯ ಸಹಾಯಕರರಾದ ಹರಿಶ್ಚಂದ್ರ ನಾಯ್ಕ್, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಗಾಯತ್ರಿ ವೈ, ಕೋಟ ಪೊಲೀಸ್ ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.