ಡೈಲಿ ವಾರ್ತೆ: 21/ಜುಲೈ /2024

ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ: ರಾಷ್ಟ್ರೀಯ ಸಮ್ಮೇಳನ ಆಯೋಜನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ (ಮೀಡಿಯಾ ಎಜ್ಯುಕೇಷನ್: ಎ ಲೆಗಸಿ ಟು ಹೋಲ್ಡ್, ಎ ಫ್ಯೂಚರ್ ಟು ಬಿಲ್ಡ್) “ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ”
ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ 2024ರ ಜುಲೈ 22ರಂದು ಬೆಳಗ್ಗೆ 10:30 ಗಂಟೆಗೆ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಂವಿವಿಯ ಕುಲಪತಿಗಳಾದ ಪ್ರೊ. ಡಾ. ಜಯಕರ ಶೆಟ್ಟಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾದ ಪ್ರೊ. ಎಸ್.ಆರ್. ನಿರಂಜನ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ ಅವರು ಪ್ರಮುಖ ಉಪನ್ಯಾಸ ನೀಡಲಿದ್ದಾರೆ.

ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ಮಖನ್ ಲಾಲ್ ಚತುರ್ವೇದಿ ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ನಿರಂಜನ ವಾನಳ್ಳಿ, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೈಕ್ ಲತೀಫ್, ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಬೆಂಗಳೂರು ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಡಾ. ಸುನೀತಾ ಎಂ. ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗವು ಸುವರ್ಣ ಮಹೋತ್ಸವ ಮತ್ತು ಒಂದು ದಿನದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭವು ಜುಲೈ 22ರಂದು ಸಂಜೆ 4:00 ಗಂಟೆಗೆ ನಡೆಯಲಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ
ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಪ್ರಾಧ್ಯಾಪಕ ಡಾ. ಎನ್. ಸಂಜೀವ ರಾಜ್, ಸಹಾಯಕ ಪ್ರಾಧ್ಯಾಪಕ ಡಾ. ವಸುಂಧರಾ ಪ್ರಿಯದರ್ಶಿನಿ, ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಮತ್ತಿತರರು ಸೇರಿದಂತೆ ಭಾಗವಹಿಸಲಿದ್ದಾರೆ.