ಡೈಲಿ ವಾರ್ತೆ: 21/ಜುಲೈ /2024
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ – ಚಾಲಕ ಗಂಭೀರ ಗಾಯ!
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡು ಘಟನೆ ಭಾನುವಾರ ಕಲಘಟಗಿಯ ರಾಮನಾಳ ಸಮೀಪ ಮಧ್ಯಾಹ್ನ ನಡೆದಿದೆ.
ಕುಮಟಾದಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಕೆಎಸ್ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಿಂದ ಬಸ್ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಮುಟಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಸಿದ್ದಾರೆ.