ಡೈಲಿ ವಾರ್ತೆ: 23/ಜುಲೈ /2024
ಕೋಟದ ಪಂಚವರ್ಣ ಸಂಸ್ಥೆಯ 217ನೇ ಪರಿಸರಸ್ನೇಹಿ ಅಭಿಯಾನ – ಪ್ರಕೃತಿ ಉಳಿಸದಿದ್ದರೆ ಮುಂದಿನ ಪೀಳಿಗೆ ಕಷ್ಟಕರ – ಸತೀಶ್ ಕುಂದರ್
ಕೋಟ: ಪ್ರಕೃತಿಯನ್ನು ಉಳಿಸದಿದ್ದರೆ ಮುಂದಿನ ಪೀಳಿಗೆಗೆ ಸಂಚಕಾರ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ನುಡಿದರು.
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಕೋಟ ಇವರುಗಳ ಸಹಯೋಗದೊಂದಿಗೆ ಹಸಿರು ಜೀವ ಪರಿಸರಸ್ನೇಹಿ ಅಭಿಯಾನಕ್ಕೆ 217ನೇ ಭಾನುವಾರದ ಸಂಭ್ರಮ ಈ ಹಿನ್ನಲೆಯಲ್ಲಿ ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯೋಜನೆಯೊಂದಿಗೆ ಹಮ್ಮಿಕೊಂಡ ವನಮಹೋತ್ಸವದಲ್ಲಿ ಮಾತನಾಡಿ ಗಿಡ ಮರಗಳ ಪೋಷಣೆಯಿಲ್ಲದಿದ್ದರೆ ಮನುಕುಲಕ್ಕೆ ಉಳಿಗಾಲವಿಲ್ಲ ಶುದ್ಧ ಗಾಳಿ ಹಸಿರು ವಾತಾವರಣ ಇದ್ದರೆ ಮಾತ್ರ ನಾವುಗಳು ಬದಕಲು ಸಾಧ್ಯ ಅದಕ್ಕಾಗಿ ಪಂಚವರ್ಣದ ಪ್ರಕೃತಿ ಮಾತೆಯ ಆರಾಧನೆ ಎಲ್ಲಾ ಸಂಘಗಳಿಗೆ ಮಾದರಿಯಾಗಿದೆ ಎಂದರು.
ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಶಿವಮೂರ್ತಿ ಉಪಾಧ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಭಾಸ್ಕರ್ ಶೆಟ್ಟಿ, ಕೃಷಿಕರಾದ ರವೀಂದ್ರ ಶೆಟ್ಟಿ,ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿಯ ಪ್ರಧಾನಕಾರ್ಯದರ್ಶಿ ಕೆ.ದಿನೇಶ್ ಗಾಣ ಗ,ಪಡುಕರೆ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವೀಣಾ,ಪಂಚವರ್ಣ ಯುವಕ ಮಂಡಲದ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್,ವಿದ್ಯುತ್ ವಿದ್ಯುತ್ ಗುತ್ತಿಗೆದಾರ ರಮೇಶ್ ಪೂಜಾರಿ,ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ನಿರ್ದೇಶಕ ರಾಜೇಂದ್ರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು.ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.