ಡೈಲಿ ವಾರ್ತೆ: 25/ಜುಲೈ /2024
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು
ಉಡುಪಿ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ ರೂ.672.ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದೆ.
ಉಚ್ಚನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.