ಡೈಲಿ ವಾರ್ತೆ: 26/ಜುಲೈ /2024

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಗರ್ಭವತಿಯಾದ ಯುವತಿ – ಆರೋಪಿ ಬಂಧನ

ಬಂಟ್ವಾಳ : ಯುವತಿಯೋರ್ವಳನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿಯನ್ನಾಗಿ ಮಾಡಿದ ಆರೋಪದಲ್ಲಿ ವಿವಾಹಿತನೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅಮ್ಟಾಡಿ ನಿವಾಸಿ ವಿವಾಹಿತ ಗುರುಪ್ರಸಾದ್ ಬಂಧಿತ ಆರೋಪಿ.

ಈತನಿಂದ ಅನ್ಯಾಯಕ್ಕೊಳಗಾದ ಯುವತಿ ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಅಮ್ಟಾಡಿ ನಿವಾಸಿ ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದು ನ್ಯಾಯ ಒದಗಿಸಿಕೊಡುವಂತೆ ಸಂತ್ರಸ್ತ ಯುವತಿ ಠಾಣೆಗೆ ದೂರು‌ ನೀಡಿದ್ದಳು.

  ಆರೋಪಿ ಗುರುಪ್ರಸಾದ್ ನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಅಮ್ಟಾಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.