ಡೈಲಿ ವಾರ್ತೆ: 27/ಜುಲೈ /2024

ತೀರ್ಥಹಳ್ಳಿ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ಸವಾರ ಸ್ಥಳದಲ್ಲೇ ಸಾವು!

ತೀರ್ಥಹಳ್ಳಿ: ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 26 ಶುಕ್ರವಾರ ತಡರಾತ್ರಿ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕ ರಾಮಪ್ಪ (26) ಎಂದು ಗುರುತಿಸಲಾಗಿದೆ.

ಕೋಣಂದೂರಿಗೆ ಕೆಲಸದ ನಿಮಿತ್ತ ರಾಮಪ್ಪ ತೆರಳಿದ್ದರು. ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ ಮರವೊಂದು ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.