ಡೈಲಿ ವಾರ್ತೆ: 27/ಜುಲೈ /2024

ಬೆಳ್ತಂಗಡಿ: ಬೈಕ್ ಗೆ ಬೊಲೆರೋ ವಾಹನ ಢಿಕ್ಕಿ – ಬಾಲಕಿ ಮೃತ್ಯು, ಸವಾರ ಗಾಯ

ಬೆಳ್ತಂಗಡಿ: ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 27 ರಂದು ಶನಿವಾರ ಸಂಜೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನಡೆದಿದೆ.

ಕಲ್ಮಂಜ ಗ್ರಾಮದ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಗಾನವಿ ಪುತ್ರಿಯಾದ ಅನರ್ಘ್ಯ ಮೃತ ಬಾಲಕಿ.

ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯಲ ಆರನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ತಂದೆಯೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಡಿಕ್ಕಿ ಹೊಡೆದ ಬೊಲೆರೊ ವಾಹನ 30 ಮೀಟರ್ ಎಳೆದುಕೊಂಡು ಹೋಗಿದೆ. ಪರಿಣಾಮ ಸ್ಥಳದಲ್ಲೇ ಅನರ್ಘ್ಯ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಲ್ಲದೆ ಗಾಯಗೊಂಡ ಗುರುಪ್ರಸಾದ್ ಗೋಖಲೆ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.