ಡೈಲಿ ವಾರ್ತೆ: 27/ಜುಲೈ /2024
ಕೋಟದಲ್ಲಿ ಬೃಹತ್ ಆಧಾರ್ ಮೇಳ – ಸಂಘಟನೆಗಳಿಂದ ಸಾಮಾಜಿಕ ವ್ಯವಸ್ಥೆ ಕಳಕಳಿ – ಶಾಸಕ ಕೊಡ್ಗಿ
ಕೋಟ: ಸಂಘಸಂಸ್ಥೆಗಳು ಸಾಮಾಜಿಕ ವ್ಯವಸ್ಥೆಯ ಪರವಾಗಿ ಸದಾ ತುಡಿತ ಹೊಂದಿರಬೇಕು ಆಗ ಮಾತ್ರ ಸಮಾಜದಲ್ಲಿ ಸ್ಚಲ್ಪ ಬದಲಾವಣೆ ಸಾಧ್ಯ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು.
ಶನಿವಾರ ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಭಾರತೀಯ ಅಂಚೆ ಇಲಾಖೆ,ನವೋದಯ ಫ್ರೆಂಡ್ಸ್ ಹರ್ತಟ್ಟು ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಕೋಟ,ವ್ಯವಸ್ಥಾಪನ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ, ಬ್ರಹ್ಮಾವರ, ತೆಕ್ಕಟ್ಟೆ,ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ
ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಸರಕಾರದ ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಜನಪ್ರತಿನಿಧಿಗಳಿಗೆ ಸೀಮಿತವಾಗದೆ. ಸಂಘಸಂಸ್ಥೆಗಳು ಹೊಂದಿರುವುದು ಶ್ಲಾಘನೀಯ ಈ ದಿಸೆಯಲ್ಲಿ ನವೋದಯ ಫ್ರೆಂಡ್ಸ್ ಒಂದಿಷ್ಟು ಸಾಮಾಜಿಕ ಕಾರ್ಯಗಳ ಬಗ್ಗೆ ಶಾಸಕರು ಪ್ರಶಂಸಿದರು.
ಕಾರ್ಯಕ್ರಮವನ್ನು ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ನಿವೃತ್ತ ಪೋಸ್ಟ್ ಮ್ಯಾನ್ ರಮೇಶ್ ಭಟ್ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ನವೋದಯ ಫ್ರೆಂಡ್ಸ್ ಗೌರವಾಧ್ಯಕ್ಷ ಮಹೇಶ್ ಪೂಜಾರಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಲೆಕ್ಕಿಗ ರಾಘವೇಂದ್ರ ಹಕ್ಲಾಡಿ, ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ,ಸದಸ್ಯರಾದ ಶಿವರಾಮ ಶೆಟ್ಟಿ, ಅಜಿತ್ ದೇವಾಡಿಗ, ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್,ಉಡುಪಿ ಅಂಚೆ ಇಲಾಖೆಯ ಸಹಾಯಕ ಅಧೀಕ್ಷ ಪಿ.ಎನ್ ಸತೀಶ್ ,ಭಾರತೀಯ ಜನೌಷಧ ಕೇಂದ್ರ ಬ್ರಹ್ಮಾವರ ಇದರ ಮುಖ್ಯಸ್ಥ ಮಧುಸೂಧನ ಹೇರೂರು,ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಅಧ್ಯಕ್ಷ ಸುಂದರ್ ಪೂಜಾರಿ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿಲಾ ಪೂಜಾರಿ,ಜಯಂಟ್ಸ್ ಯೂನಿಟ್ ನಿರ್ದೇಶಕ ವಿವೇಕ್ ಕಾಮತ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನವೋದಯ ಫ್ರೆಂಡ್ಸ್ ಸದಸ್ಯ ಕೀರ್ತಿಶ ಪೂಜಾರಿ ಸ್ವಾಗತಿಸಿ ನಿರೂಪಿದರು.
ನವೋದಯ ಫ್ರೆಂಡ್ಸ್ ಕಾರ್ಯದರ್ಶಿ ಭರತ್ ಕೋಟ ವಂದಿಸಿದರು. ಪ್ರಸನ್ನ ಕಾರಂತ್ ಸಹರಿಸಿದರು.
ಕಾರ್ಯಕ್ರಮವನ್ನು ನವೋದಯ ಫ್ರೆಂಡ್ಸ್ ಮಾಜಿ ಅಧ್ಯಕ್ಷ ಶ್ರೀನಾಥ್ ಕೋಟ ಸಂಯೋಜಿಸಿದರು.