ಡೈಲಿ ವಾರ್ತೆ: 28/ಜುಲೈ /2024
ಪಂಚವರ್ಣದ ಆಸಾಡಿ ಒಡ್ರ್ ಕ್ರೀಡಾಕೂಟಕ್ಕೆ ಚಾಲನೆ:
ಗ್ರಾಮೀಣ ವಿಚಾರಧಾರೆ ಉಳಿಸುವ ಪ್ರಯತ್ನ – ಭಾರತಿ ಮಯ್ಯ
ಕೋಟ: ಮರೆಯಾಗುತ್ತಿರುವ ಗ್ರಾಮೀಣ ಭಾಷೆ ಬದುಕಿನ ವಿಚಾರಧಾರೆ ಉಳಿಸುವ ಅಗತ್ಯತೆ ಇದೆ ಈ ಹಿನ್ನಲ್ಲೆಯಲ್ಲಿ ಪಂಚವರ್ಣ ಮಹಿಳಾ ಮಂಡಲ ಅರ್ಥಪೂರ್ಣ ಕಾರ್ಯಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸಾಂಸ್ಕöÈತಿಕ ಚಿಂತಕಿ ಸ್ನೇಹಕೂಟದ ಭಾರತಿ ವಿ.ಮಯ್ಯ ನುಡಿದರು.
ಭಾನುವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಇದೇ ಬರುವ ಅಗಸ್ಟ್ 11ರಂದು ಹಂದಟ್ಟಿನ ಗೆಳೆಯರ ಬಳಗ ಸಭಾಂಗಣದಲ್ಲಿ ಆಸಾಡಿ ಒಡ್ರ್ ಊರ್ ಕೇರಿ ಬದ್ಕ್ ಶೀರ್ಷಿಕೆಯಡಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಬದುಕಿನ ಅದೆಷ್ಟೋ ಕ್ರೀಡೆಗಳು ಸಾಂಸ್ಕöÈತಿಕ ಚಹರೆಗಳು ಪ್ರಸ್ತುತ ಯುವ ಸಮೂಹಕ್ಕೆ ಪಸರಿಸುವ ಜತೆಗೆ ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.
ಈ ದಿಸೆಯಲ್ಲಿ ಪಂಚವರ್ಣ ಮಹಿಳಾ ಮಂಡಲ ಕಳೆದ ಮೂರು ವರ್ಷಗಳಿಂದ ಈ ಕಾರ್ಯಗಳನ್ನು ಹಮ್ಮಿಕೊಂಡಿದೆ ಎಂದು ಪ್ರಶಂಸಿದರು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ರತ್ನಾ ಪೂಜಾರಿ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು.ಉಪಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು ಪ್ರಸ್ತಾವಿಕ ಮಾತನಾಡಿದರು.ಸಂಚಾಲಕಿ ಸುಜಾತ ಎಂ.ಬಾಯರಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯದರ್ಶಿ ಶಕೀಲ ಎನ್ ಪೂಜಾರಿ ವಂದಿಸಿದರು.
ಗಮನ ಸೆಳೆದ ಕ್ರೀಡೆಗಳು
ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಿಡಿ ಕಡ್ಡಿ ನೆಯುವುದು,ಹಲಸಿನ ಕಡ್ಬು ಕೊಟ್ಟೆ ರಚನೆ,ಸಂಗೀತ ಕುರ್ಚಿ,ಮಡಿಕೆ ಒಡೆಯುವ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳು ಗಮನ ಸೆಳೆದವು.