ಡೈಲಿ ವಾರ್ತೆ: 30/ಜುಲೈ /2024

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 30 ರಂದು ಮಂಗಳವಾರ ಬೆಳಿಗ್ಗೆ ನಗರದ ನಂತೂರು ಪದವು ಬಳಿ ನಡೆದಿದೆ.

ಮೃತಪಟ್ಟ ಯುವಕ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ (42) ಎಂದು ಗುರುತಿಸಲಾಗಿದೆ.
ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.