ಡೈಲಿ ವಾರ್ತೆ: 30/ಜುಲೈ /2024
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ನಾಳೆ ಜು. 31 ರಂದು ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜುಲೈ 31 ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.