ಡೈಲಿ ವಾರ್ತೆ: 30/ಜುಲೈ /2024
ವಿಷ ಸೇವಿಸಿದ್ದ ಯಕ್ಷಗಾನ ಯುವ ಕಲಾವಿದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು
ಬ್ರಹ್ಮಾವರ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯಕ್ಷಗಾನ ಕಲಾವಿದ ಗುರುಪ್ರಸಾದ ನೀರ್ಜೆಡ್ಡು (26) ಅವರು ಮಂಗಳವಾರ ಮೃತಪಟ್ಟಿದ್ದಾರೆ.
ಜುಲೈ 27ರಂದು ಇಲಿ ಪಾಷಾಣ ಸೇವಿಸಿ, ಅಸ್ವಸ್ಥರಾಗಿದ್ದ ಅವರನ್ನು ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ,ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಅವರು ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು ಎಂದು ಹೇಳಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.