ಡೈಲಿ ವಾರ್ತೆ: 31/ಜುಲೈ /2024

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಇಂದು ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತಿದ್ದು ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಿಗೆ ಇಂದು ಜು.31 ರಂದು ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.