ಡೈಲಿ ವಾರ್ತೆ: 31/ಜುಲೈ /2024

ಗಂಗೊಳ್ಳಿ: ಮನೆಯ ಹಿತ್ತಲಿನಲ್ಲಿ 11 ಅಡಿ ಉದ್ದದ ಹೆಬ್ಬಾವು ಪತ್ತೆ!

ಗಂಗೊಳ್ಳಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಲ್ಯೆಟ್ ಹೌಸ್ ಸಮೀಪದ ಗದ್ದೆ ಮನೆ ನರಸಿಂಹ ಪೂಜಾರಿ ಯವರ ಮನೆಯ ಹಿತ್ತಲಿನಲ್ಲಿ 16 ಕೆಜಿ ತೂಕದ 11 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿತ್ತು.

ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಹೆಬ್ಬಾವು ವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು.

ಕಾರ್ಯಾಚರಣೆಯಲ್ಲಿ ಸ್ಥಳೀಯ ಗಣೇಶ್ ಖಾರ್ವಿ, ವಿಶ್ವನಾಥ ಗಂಗೊಳ್ಳಿ, ಸುಂದರ ಪಿ, ನಾಗೇಂದ್ರ, ಮಡಿ ನಾಗರಾಜ ಖಾರ್ವಿ, ವಿಶ್ವನಾಥ ಪೂಜಾರಿ, ರತ್ನಾಕರ ಪೂಜಾರಿ, ಸಂದೀಪ ಪೂಜಾರಿ, ರಾಜು ಪೂಜಾರಿ ಮತ್ತಿತರರು ಪಾಲ್ಗೊಂಡರು.