ಡೈಲಿ ವಾರ್ತೆ: 31/ಜುಲೈ /2024
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮುಂದುವರಿದ ಮಳೆ: ನಾಳೆ ಆ.1 ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 1ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.