ಡೈಲಿ ವಾರ್ತೆ: 01/ ಆಗಸ್ಟ್/2024
ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್: ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ಅ. 2 ರಂದು ರಜೆ ಘೋಷಣೆ – ಡಿಸಿ ಲಕ್ಷ್ಮೀಪ್ರಿಯಾ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ವ್ಯಾಪಕ ಮಳೆ ಸುರಿವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನಲೆಯಲ್ಲಿ ಅ. 2 ರಂದು ( ಶುಕ್ರವಾರ) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ , ಭಟ್ಕಳ, ಜೋಯಿಡಾ, ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್,ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಗುರುವಾರ ಆದೇಶ ಹೊರಡಿಸಿದ್ದಾರೆ.
ಈ ಮೇಲೆನ ತಾಲ್ಲೂಕುಗಳನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ತಾಲ್ಲೂಕಿನಲ್ಲಿ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.